ಬೆಂಗಳೂರು: ಅತ್ತೆಯನ್ನು ಕೊಲೆ ಮಾಡಲು ಸೊಸೆಯೊಬ್ಬಳು ವೈದ್ಯರ ಬಳಿ ಮಾತ್ರೆಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ತಕ್ಷಣವೇ ವೈದ್ಯರು ಸಂಜಯ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರಿಗೆ ಮಹಿಳೆಯೊಬ್ಬರು ವಾಟ್ಸಾಪ್ ನಲ್ಲಿ ಮೆಸೆಜ್ ಮಾಡಿದ್ದು, ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಅವರನ್ನು ಹೇಗೆ ಸಾಯಿಸೋದು? ಒಂದೆರೆಡು ಮಾತ್ರೆ ತೆಗೆದುಕೊಂಡರೆ ಸಾಯುತ್ತಾರಲ್ಲ, ಅದನ್ನು ಹೇಳಿ ಎಂದು ಮೆಸೇಜ್ ಮೂಲಕ ಕೇಳಿದ್ದಾರೆ.
ಈ ವೇಳೆ ವೈದ್ಯರು ಕೊಲ್ಲುವುದು ನಮ್ಮ ಕೆಲಸ ಅಲ್ಲ ಎಂದು ಬುದ್ಧಿವಾದ ಹೇಳಲು ಮುಂದಾಗುತ್ತಿದ್ದಂತೆಯೇ, ಮಹಿಳೆ ತನ್ನ ಮೆಸೆಜ್ ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ನ್ನು ಬ್ಲಾಕ್ ಮಾಡಿದ್ದಾಳೆ.
ಆದರೆ ವೈದ್ಯರು ಮೊದಲೇ ಮಹಿಳೆಯ ವಾಟ್ಸಾಪ್ ಸಂದೇಶವನ್ನು ಮೊಬೈಲ್ ನಲ್ಲಿ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದರು. ಬಳಿಕ ಸಂಜಯ್ ನಗರ ಪೊಲೀಸರಿಗೆ ಮಾಹಿತಿ ನೀಡಿ , ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4