ತನ್ನ ಏಳು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಳು ತನ್ನ ಲಿವ್-ಇನ್ ಮಿತ್ರನಿಗೆ ಪ್ರೋತ್ಸಾಹಿಸಿದ್ದಕ್ಕಾಗಿ ಕೇರಳದ ಮಹಿಳೆಯೊಬ್ಬರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ 6 ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ತಿರುವನಂತಪುರಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಆರ್. ರೇಖಾ ಈ ಶಿಕ್ಷೆಯನ್ನು ಘೋಷಿಸಿದ್ದಾರೆ.
ಮಾರ್ಚ್ 2018 ಮತ್ತು ಸೆಪ್ಟೆಂಬರ್ 2019 ರ ನಡುವೆ ಏಳು ವರ್ಷದ ಬಾಲಕಿಯ ಮೇಲೆ ಶಿಶುಪಾಲನ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ನ್ಯಾಯಾಲಯವು ಈ ತೀರ್ಪು ಪ್ರಕಟಿಸಿದೆ.


