nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು
    ತುಮಕೂರು January 17, 2022

    ದಯಮರಣ ಕೋರಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಅತಿಥಿ ಉಪನ್ಯಾಸಕರು

    By adminJanuary 17, 2022No Comments2 Mins Read
    daya marana

    ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.


    Provided by
    Provided by
    Provided by

    ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗದಿಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು. ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7,500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ. ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ, ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‌ ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

    ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ, ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ. ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ. ನಮ್ಮ ಮುಂದೆಯೇ ಹಲವಾರು ಉದಾಹರಣೆಗಳಿವೆ. ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

    ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರ ಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು. 2.60 ಲಕ್ಷ ಕೋಟಿ ಬಜೆಟ್‌ ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ, ಮಂಜಣ್ಣ, ಡಾ.ಕುಮಾರ್, ರಂಗಧಾಮಯ್ಯ, ಗಂಗಾಂಭಿಕೆ, ಗುಡ್ಡಣ್ಣ, ಅಂಬಿಕಾ, ಸುನಿಲ್, ಹರೀಶ್, ಸುನಿಲ್ ಕುಮಾರ್, ಡಾ.ರಮೇಶ್, ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡಲಾಯಿತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.