ಸರಗೂರು: ಡಿಬಿ ಕುಪ್ಪೆ ಗ್ರಾಮದ ವ್ಯಾಪ್ತಿಯ ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೇನೆ ಎಂದು ಮಾಜಿ ಶಾಸಕ ಚಿಕ್ಕಣ್ಣ ಹೇಳಿದರು
ಸರಗೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಬಿ ಕುಪ್ಪೆ, ಆನೆ ಮಾಳ, ಮಚ್ಚೂರು ಗ್ರಾಮಗಳಲ್ಲಿ ವಾಸಿಸುವ ಜನರಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ ಇದು ಹಲವು ವರ್ಷಗಳಿಂದ ದೊಡ್ಡ ಸಮಸ್ಯೆಯಾಗಿದೆ ಕೂಡಲೇ ಹಕ್ಕು ಪತ್ರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಜತೆ ಚರ್ಚಿಸಿದ್ದೇನೆ. ಮನವಿ ಪತ್ರವನ್ನು ನೀಡಿದ್ದೇನೆ ಮುಂದಿನ ದಿನಗಳಲ್ಲಿ ಹಕ್ಕು ಪತ್ರ ನೀಡಲು ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು
ಯುವ ಮುಖಂಡ ಜಯಪ್ರಕಾಶ್. ಜೆಡಿಎಸ್ ಪಕ್ಷದ ಅಧ್ಯಕ್ಷ ರಾಜೇಂದ್ರ. ನಾಗನಾಯಕ. ಪುರಸಭೆ ಸದಸ್ಯ ಹರೀಶ್ ಗೌಡ.ರಾಜೇಗೌಡ.ಎನ್ ಡಿ ರಾಜಣ್ಣ. ಇನ್ನಿತರರು ಇದ್ದರು.