ಬೆಂಗಳೂರು : ಇಂದು ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ.
ಇಂದು ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ.
ಬೆಳಗಾವಿ, ಧಾರವಾಡ, ದಾವಣಗೆರೆ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಮಳೆಯಿಂದಾಗಿ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿ, ಪರಿಸ್ಥಿತಿ ನಿಭಾಯಿಸುವ ಸಂಬಂಧ ಸಲಹೆ ಸೂಚನೆ ನೀಡಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


