ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಕಾನೂನು ಬಾಹಿರವಾಗಿ ಕಡಿದ ಆರೋಪದಲ್ಲಿ ವಿರಾಜಪೇಟೆ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ (ಡಿಸಿಎಫ್), ಸದ್ಯ ಬೆಂಗಳೂರು ನಗರ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೈ. ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ.
ವಿರಾಜಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿರುವ ಎಂ. ಎನ್. ರಮೇಶ್ ಅವರ ಜಮೀನಿನಲ್ಲಿದ್ದ ಸಾಗುವಾನಿ ಮರಗಳನ್ನು ಕಡಿದ ಪ್ರಕರಣದಲ್ಲಿ ಕೆಲವು ಅಧಿಕಾರಿಗಳ ಜೊತೆ ಐಎಫ್ಎಸ್ ಅಧಿಕಾರಿಯಾಗಿರುವ ಚಕ್ರಪಾಣಿ ಕೂಡಾ ಭಾಗಿಯಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಮಾನತು ಆದೇಶದಲ್ಲಿ ವಿವರಿಸಲಾಗಿದೆ.
ತಮ್ಮ ಕಾಫಿ ಎಸ್ಟೇಟ್ನಲ್ಲಿದ್ದ, ಸರ್ಕಾರಕ್ಕೆ ಸೇರಿದ ಆರು ಮರಗಳನ್ನು ಕಡಿಯಲು ಅನುಮತಿ ನೀಡುವಂತೆ ರಮೇಶ್ ಅವರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ, ಎಸ್ಟೇಟ್ ಮಾಲೀಕರ ನಕಲಿ ಸಹಿ ಮಾಡಿ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮತ್ತು ವಯನಾಡ್ ವನ್ಯಜೀವಿ ಅಭಯಾರಣ್ಯದಿಂದ ಕೇವಲ 10 ಮೀಟರ್ ದೂರದಲ್ಲಿ ಸರ್ಕಾರ ಭೂಮಿ ಅತಿಕ್ರಮಿಸಿದ ಪ್ರದೇಶದಲ್ಲಿದ್ದ ಬೃಹತ್ ಗಾತ್ರದ 66 ಮರಗಳನ್ನು ಕಡಿಯಲು ಅನುಮತಿ ನೀಡುವಂತೆ ರಮೇಶ್ ಅವರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ, ಎಸ್ಟೇಟ್ ಮಾಲೀಕರ ನಕಲಿ ಸಹಿ ಮಾಡಿ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮತ್ತು ವಯನಾಡ್ ವನ್ಯಜೀವಿ ಅಭಯಾರಣ್ಯದಿಂದ ಕೇವಲ 10 ಮೀಟರ್ ದೂರದಲ್ಲಿ ಸರ್ಕಾರ ಭೂಮಿ ಅತಿಕ್ರಮಿಸಿದ ಪ್ರದೇಶದಲ್ಲಿದ್ದ ಬೃಹತ್ ಗಾತ್ರದ 66 ಮರಗಳನ್ನು ಕಡಿಯಲು ಅನುಮತಿ ಕೋರಿದ ಕಡತವನ್ನು ಸೃಷ್ಟಿಸಲಾಗಿತ್ತು.
ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿ ಇಲ್ಲದೆ, ತಹಶೀಲ್ದಾರ್ ನೀಡಿದ್ದ ಬೋಗಸ್ ವರದಿಯ ಆಧರಿಸಿ ಮತ್ತು ಸ್ಥಳ ಪರಿಶೀಲನೆ ನಡೆಸದೆ ಮರಗಳನ್ನು ಕಡಿಯಲು ಚಕ್ರಪಾಣಿ ಅವರು ಅನುಮತಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಜಾಗೃತ ದಳ) ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


