ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳು ಹಾಗೂ ಇಂದಿರಾ ಕ್ಯಾಂಟಿನ್ ಗಳ ಕಾರ್ಯವೈಖರಿ ಪರಿಶೀಲನೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೇ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಇಂದಿರಾ ಕ್ಯಾಂಟೀನ್ ನಲ್ಲಿ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಜೊತೆಗೆ ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲ ಸಂಸ್ಥೆಗಳ ಕಾರ್ಯ ವೈಖರಿ ಸರಿಯಾದ ರೀತಿಗೆ ತರುವ ಕೆಲಸವನ್ನು ಮೊದಲು ಮಾಡುತ್ತೇವೆ ಎಂದು ಹೇಳಿದರು.
ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳೂ ಪರಿಶೀಲನೆ ಮಾಡ್ತಿಲ್ಲ. ಬೆಂಗಳೂರು ನಗರ ಸ್ವಚ್ಛವಾಗಿಡಬೇಕು. ಆದ್ರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿ ಅಧಿಕಾರಿಗಳನ್ನ ಪ್ರಶ್ನಿಸಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


