ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಸಚಿವ ಯು.ಟಿ. ಖಾದರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಸಚಿವರ ಭೇಟಿಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್, “ಡಿಸಿಎಂ ಪರಮೇಶ್ವರ್ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದು, ಆರೋಗ್ಯವಾಗಿದ್ದಾರೆ” ಎಂದು ತಿಳಿಸಿದ್ದಾರೆ.
ವಸಂತನಗರದ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಆಯೋಜಿಸಲಾಗಿದ್ದ ‘ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್’ ಉದ್ಘಾಟನಾ ಸಮಾರಂಭದಲ್ಲಿ ಡಾ.ಜಿ. ಪರಮೇಶ್ವರ್ ಭಾಗವಹಿಸಿದ್ದರು. ಈ ವೇಳೆ ಅವರು ಆಟಗಾರರಿಗೆ ಶುಭಾಶಯ ಕೋರಿದ್ದರು. ಆದರೆ ಕಾರ್ಯಕ್ರಮದ ನಡುವೆಯೇ ಅವರಿಗೆ ತೀವ್ರ ಸುಸ್ತು ಕಾಣಿಸಿಕೊಂಡಿದ್ದರಿಂದ, ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಮಿಸುವ ಮುನ್ನವೇ ಅಲ್ಲಿಂದ ತೆರಳಿದ್ದರು. ಬೆಳಿಗ್ಗೆಯಿಂದಲೇ ಅವರಿಗೆ ಆಯಾಸ ಉಂಟಾಗಿತ್ತು ಎಂದು ತಿಳಿದುಬಂದಿದೆ, ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
