ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಫಲಿತಾಂಶ ಹೊರಬೀಳುತ್ತಿದೆ. ಈ ಮಧ್ಯೆ ಆರಂಭದಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳ ನಡುವೆ ಸಮಬಲದ ಹೋರಾಟ ನಡೆಯುತ್ತಿತ್ತು. ಆದರೆ ಇದೀಗ ಎಎಪಿ ಮುನ್ನಡೆ ಸಾಧಿಸಿದೆ.
ದೆಹಲಿಯ ಆಡಳಿತಾರೂಢ ಎಎಪಿ ಪಕ್ಷ 128 ಸ್ಥಾನಗಳಲ್ಲಿ, ಬಿಜೆಪಿ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಕಾಂಗ್ರೆಸ್ ಪಕ್ಷ 10 ಸ್ಥಾನಗಳಲ್ಲಿ ಇತರರು 4 ಸ್ಥಾನಗಳಲ್ಲಿ ಮುಂದೆ ಇದ್ದಾರೆ. 250 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು ಇಂದು ಫಲಿತಾಂಶ ಪ್ರಕಟವಾಗುತ್ತಿದೆ. ಪಾಲಿಕೆ ಅಧಿಕಾರದ ಗದ್ದುಗೆಗೇರಲು 126 ಮ್ಯಾಜಿಕ್ ನಂಬರ್ ಆಗಿದೆ.
ಮತದಾನೋತ್ತರ ಸಮೀಕ್ಷೆಯಲ್ಲಿ ಎಎಪಿಯು 154 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಲಿದ್ದು, ಬಿಜೆಪಿ 84 ಕ್ಷೇತ್ರಗಳಲ್ಲಷ್ಟೇ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಕೇವಲ ಆರು ವಾರ್ಡ್‌ಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy