ತುಮಕೂರು: ಕಾಣೆಯಾಗಿದ್ದ ಇಬ್ಬರು ಮಕ್ಕಳು ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಯದುವೀರ್, ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮನೋಹರ್ ಮೃತ ದುರ್ದೈವಿಯಾಗಿದ್ದಾರೆ.
ಇಬ್ಬರೂ ನೆನ್ನೆ ಸಂಜೆ 7ಯಿಂದ ಕಾಣೆಯಾಗಿದ್ದರು. ಇಂದು ಬೆಳಗ್ಗೆ ಇಬ್ಬರ ಮೃತದೇಹ ಎತ್ತಿನಹೊಳೆ ಕಾಮಗಾರಿ ಮಾಡುತ್ತಿರುವ ಗುಂಡಿಯಲ್ಲಿ ಪತ್ತೆಯಾಗಿದೆ.
ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಹಾಗೂ ಕುಟುಂಬದವರು ಸ್ಥಳದಲ್ಲಿಯೇ ಶವಗಳನ್ನು ಇಟ್ಟು ಪ್ರತಿಭಟನೆ ಮಾಡಿ, ಕಾಮಗಾರಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296