ಅಪಾರ್ಟ್‌ಮೆಂಟ್ ವೊಂದರಲ್ಲಿ ಮೂವರು ಮಹಿಳೆಯರು ಮತ್ತು ಪುರುಷನ ಮೃತದೇಹ ಪತ್ತೆಯಾದ ಘಟನೆ ಸೂರತ್ ನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ, ಅನಿಲ ಚಾಲಿತ ಗೀಸರ್ ಚಾಲನೆಯಲ್ಲಿದ್ದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಆದರೆ ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಪತ್ತೆಯಾಗಿಲ್ಲ ಎಂದು ಎಂದು ಡಿಸಿಪಿ ಹೇಳಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ನಾಲ್ವರು ಮೃತಪಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಫ್ಲಾಟ್ ಮಾಲಕಿ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53), ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತರು ರಾತ್ರಿ 10 ಗಂಟೆ ಸುಮಾರಿಗೆ ಮಲಗಿದ್ದರು. ಜಸುಬೆನ್ ಅವರ ಮಗ ಬೆಳಗ್ಗೆ 8 ಗಂಟೆಯ ಸುಮಾರಿಗೆ ಅವರನ್ನು ಪರೀಕ್ಷಿಸಲು ಹೋದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತರು ವಾಂತಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296