ಹಾಸನ: ಉದಯಗಿರಿಯಲ್ಲಿರುವ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವಿಕಾಸ್(18) ಮೃತ ವಿದ್ಯಾರ್ಥಿ.
ಈತ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ವಿಕಾಸ್ ಎಂದಿನಂತೆ ಇಂದು ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್ ಗೆ ಬಂದಿದ್ದ. ಸ್ನೇಹಿತರು ಹಾಸ್ಟೆಲ್‌ಗೆ ಬಂದು ನೋಡಿದಾಗ ವಿಕಾಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಘಟನೆಯ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ ಮಾಡಿ ಪರಿಸ್ಥಿತಿ ತಿಳಿಗೊಳಿಸಲಾಗುತ್ತಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


