ಚಿಂತಾಮಣಿ: ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಚನಹಳ್ಳಿ ಗ್ರಾಮದ ಬಳಿ ಭಾನುವಾರ ಜಿಂಕೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಚಿರತೆ ದಾಳಿ ಶಂಕೆ ಹಿನ್ನೆಲೆ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಮೇ 15ರಂದು ಇದೇ ರೀತಿ ಜಿಂಕೆಯೊಂದು ಮೃತಪಟ್ಟಿತ್ತು. ಗ್ರಾಮಸ್ಥರು ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಬೋನ್ ಇಟ್ಟಿದ್ದರು. ಗ್ರಾಮದ ರೈತ ಹರೀಶ್ ಎಂಬುವವರ ಜಮೀನಿನಲ್ಲಿ ಜಿಂಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
ಕಳೆದ 10 ದಿನಗಳಲ್ಲಿ ಎರಡು ಜಿಂಕೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಮೇ 15 ರಂದು ಮೃತಪಟ್ಟ ಜಿಂಕೆಯನ್ನು ಕಂಡಾಗ, ಚಿರತೆ ದಾಳಿ ನಡೆಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿ ಅರಣ್ಯ ಇಲಾಖೆಗೆ ದೂರು ನೀಡಿದ್ದೆವು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿ ಒಂದು ಬೋನ್ ಇಟ್ಟಿದ್ದರು. ಆದರೂ ಬೋನ್ ನಲ್ಲಿ ಯಾವುದೇ ಪ್ರಾಣಿಯನ್ನು ಹಾಕಿರಲಿಲ್ಲ ಎಂದು ಹೇಳಿದರು.
ಜನರ ಭಯ ಅನುಮಾನ ಮಾಯವಾಗುಷ್ಟರಲ್ಲಿ ಮತ್ತೊಂದು ಜಿಂಕೆ ಮೃತಪಟ್ಟಿದೆ. ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಚಿರತೆಯನ್ನು ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA