ಚಿತ್ರದುರ್ಗ: ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ 4 ದಿನದ ಹಸುಗೂಸು ಸಾವನ್ನಪ್ಪಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ವೈದ್ಯರ ವಿರುದ್ಧ ಮೃತ ಮಗುವಿನ ಸಂಬಂಧಿಕರು ಆರೋಪಿಸಿದ್ದಾರೆ.
4 ದಿನದ ಹಿಂದೆ ಹೆರಿಗೆಗಾಗಿ ಕವಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ ವೈದ್ಯರ ನಿರ್ಲಕ್ಷ್ಯ ತೋರಿದ್ದಾರೆ. ಮಕ್ಕಳ ತಜ್ಞ ವೈದ್ಯ ಶ್ರೀರಾಮ್ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನಲೆ ಜಿಲ್ಲಾ ಸರ್ಜನ್ ಡಾ.ರವೀಂದ್ರ ಅವರು ಈ ಕುರಿತು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


