ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲ್ಲಿ ಯುವತಿಯ ಮೃತದೇಹ ಬಿದ್ದಿದ್ದರೆ, ಪಕ್ಕದ ಮರದಲ್ಲಿ ಯುವಕನ ದೇಹ ಪತ್ತೆಯಾಗಿದೆ.
ಯುವತಿಯನ್ನ ಸಾಯಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ನೋಂದಣಿಯ ಯೆಲ್ಲೋ ಬೋರ್ಡ್ ಕಾರಿನಲ್ಲಿ ಇಬ್ಬರು ಬಂದಿದ್ದಾರೆ.
ಯುವತಿಯ ಕುತ್ತಿಗೆಯಲ್ಲಿ ಕತ್ತು ಹಿಸುಕಿರುವ ಗುರುತು ಇದೆ. ಯುವತಿಯ ವೇಲ್ನಿಂದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4