ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ಈಗ ಸೂತಕದ ಛಾಯೆ ಆವರಿಸಿದೆ.
ಯುವಕರ ಅಂತಿಮ ಸಂಸ್ಕಾರದಲ್ಲಿ ಇಡೀ ಸೂರಣಗಿ ಗ್ರಾಮವಲ್ಲದೆ ಸುತ್ತಮುತ್ತಲಿನ ಊರುಗಳ ಜನ ಸಹ ಭಾಗಿಯಾಗಿದ್ದರು. ವಿದ್ಯುತ್ ಪ್ರವಹಿಸಿ ಸಾವಿಗೀಡಾದ ಹಣಮಂತ ಹರಿಜನ, ಮುರಳಿ ನಡುವಿನಮನಿ ಮತ್ತು ನವೀನ್ ಅವರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ನೆರವೇರಿಸಲಾಯಿತು.
ಮೃತ ಯುವಕರ ಕುಟುಂಬದವರು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ನಡೆಸುವವರಾಗಿದ್ದಾರೆ. ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.


