ತುಮಕೂರು: ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು ಕೊವಿಡ್ ನಿಯಮಗಳನ್ನು ಪಾಲಿಸಬೇಕು ಮತ್ತು ಚುನಾವಣೆಗೂ 72 ಗಂಟೆಗೂ ಮುಂಚಿತವಾಗಿ ಬಹಿರಂಗ ಪ್ರಚಾರ ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಸೂಚನೆ ನೀಡಿದ್ದಾರೆ.
ಎಲ್ಲ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಕಡ್ಡಾಯವಾಗಿ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ಚುನಾವಣೆ ದಿನಾಂಕಕ್ಕೂ 72 ಗಂಟೆ ಮುನ್ನ ಸಾರ್ವಜನಿಕ ಸಭೆ ಸಮಾರಂಭ, ರ್ಯಾಲಿ, ಬೀದಿ ನಾಟಕ ಸೇರಿದಂತೆ ಎಲ್ಲ ರೀತಿಯ ಬಹಿರಂಗ ಪ್ರಚಾರಗಳನ್ನು ಮುಕ್ತಾಯಗೊಳಿಸಬೇಕು ಎಂದು ಅವರು ಸೂಚಿಸಿದ್ದಾರೆ.
ವಿಧಾನ ಪರಿಷತ್ ಚುನಾವಣಾ ಕಣ ಇದೀಗ ರಂಗೇರಿದ್ದು, ಎಲ್ಲ ಪಕ್ಷಗಳು ಸ್ಪರ್ಧೆಗೆ ಬಿದ್ದು ಭರ್ಜರಿ ಪ್ರಚಾರ ನಡೆಸುತ್ತಿವೆ. ಬಹಿರಂಗ ಪ್ರಚಾರವು ಡಿಸೆಂಬರ್ 7ರ ಸಂಜೆ 4 ಗಂಟೆಗೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಈ ಸೂಚನೆ ನೀಡಿದ್ದಾರೆ.
ವರದಿ: ರಾಜೇಶ್ ರಂಗನಾಥ್
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700