ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಮಹಿಳೆಯೊಬ್ಬರು ತನ್ನ ಅತ್ತೆ ಮಗನ ವಿರುದ್ಧವೇ ದೂರು ನೀಡಿದ್ದಾರೆ. ಮದುವೆಯಾಗಿ ಹೊಸ ಬಾಳು ಕೊಡುವುದಾಗಿ ನಂಬಿಸಿ, ಗರ್ಭಿಣಿಯನ್ನಾಗಿಸಿ ಎಸ್ಕೆಪ್ ಆಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೌಟುಂಬಿಕ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಸಂತ್ರಸ್ತೆ 10 ವರ್ಷದಿಂದ ಪತಿಯಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದರು. ಈ ನಡುವೆ ಅತ್ತೆ ಮಗನ (ತಂದೆಯ ತಂಗಿ ಮಗ) ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿದ್ದ. ಅಂತೆಯೇ ಇಬ್ಬರೂ ಜೊತೆಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ. 6 ವರ್ಷದ ಹಿಂದೆ ಆತ ನನ್ನನ್ನು ಮದುವೆಯಾಗಿ ಬಾಳು ಕೊಡುವುದಾಗಿ ಭರವಸೆ ನೀಡಿದ್ದ. ಅಂತೆಯೇ ತುಮಕೂರಿನ ಯಲ್ಲಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ಸಹ ಜೀವನ ನಡೆಸುತ್ತಿದ್ದೆವು. ಆತ ಕೆಲಸಕ್ಕೆ ಹೋಗುತ್ತಿರಲಿಲ್ಲ. ನಾನೇ ದುಡಿಯುತ್ತಿದ್ದೆ. ಕಳೆದ ಒಂದೂವರೆ ವರ್ಷದ ಹಿಂದೆ ಬೆಂಗಳೂರಿಗೆ ಬಂದು ಪೀಣ್ಯದ ವಿದ್ಯಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ವಾಸವಾಗಿದ್ದೆವು. ಈ ನಡುವೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ, ನಮ್ಮಿಬ್ಬರ ಮದುವೆಗೆ ಮನೆಯವರು ಒಪ್ಪುತ್ತಿಲ್ಲವೆಂದು ಹೇಳಿದ್ದಾನೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


