ತುಮಕೂರು: ಜಿಲ್ಲೆಯ ಎಲ್ಲಾ ಶಾಲೆ/ಕಾಲೇಜು/ಅಂಗನವಾಡಿ/ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಡಿಸೆಂಬರ್ 9ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ತಿಳಿಸಿದ್ದಾರೆ.
ಜಂತು ಹುಳು ಬಾಧೆಯಿಂದ ರಕ್ತಹೀನತೆ, ಪೌಷ್ಟಿಕಾಂಶ ಕೊರತೆ, ನಿಶ್ಯಕ್ತಿ, ತೂಕ ಕಡಿಮೆಯಾಗುವುದು ಮತ್ತಿತರ ಪರಿಣಾಮಗಳು ಉಂಟಾಗಲಿದೆ. ಜಂತು ಹುಳು ಬಾಧೆಯಿಂದ ಉಂಟಾಗುವ ಅಪಾಯಕಾರಿ ಸಮಸ್ಯೆಯನ್ನು ನಿಯಂತ್ರಿಸಲು ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮದಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಜಂತು ಹುಳು ನಿವಾರಕ ಮಾತ್ರೆಗಳನ್ನು ನೀಡಲಾಗುವುದು.
ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 6,65,516 ಮಕ್ಕಳಿಗೆ ಜಂತು ನಿವಾರಕ ಮಾತ್ರೆಗಳನ್ನು ನೀಡುವ ಗುರಿ ಹೊಂದಲಾಗಿದೆ. ಪೋಷಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವ ಮೂಲಕ ಮಕ್ಕಳಲ್ಲಿ ಕಂಡು ಬರುವ ಜಂತು ಹುಳು ಬಾಧೆಯನ್ನು ನಿವಾರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx