nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
    ರಾಷ್ಟ್ರೀಯ ಸುದ್ದಿ August 13, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    By adminAugust 13, 2026No Comments2 Mins Read
    ramalinga reddy.jpg

    ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನದ ಕುರಿತು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ನ ಮುಂದಿನ ವಿಚಾರಣೆಯ ಫಲಿತಾಂಶವನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಈ ಕುರಿತು ವಿಸ್ತೃತ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

    12,000 ಕ್ಯುಸೆಕ್ ನೀರು ಬಿಡುಗಡೆಗೆ ಸೂಚನೆ:

    ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳಲ್ಲಿ ಕರ್ನಾಟಕವು ತಮಿಳುನಾಡಿಗೆ ಪ್ರತಿದಿನ 12,000 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಸೂಚಿಸಿವೆ. ಪ್ರಸ್ತುತ ಕರ್ನಾಟಕದ ಜಲಾಶಯಗಳಲ್ಲಿ ಸುಮಾರು 76 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದೆ. ಈ ಹಂತದಲ್ಲಿ 12,000 ಕ್ಯುಸೆಕ್ ನೀರನ್ನು ಹರಿಸುವುದು ರಾಜ್ಯದ ರೈತರು ಮತ್ತು ಕುಡಿಯುವ ನೀರಿನ ಅಗತ್ಯದ ದೃಷ್ಟಿಯಿಂದ ಅನುಕೂಲಕರವಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ತಮಿಳುನಾಡಿನ ಭವಾನಿ ಮತ್ತು ಮೆಟ್ಟೂರು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ ಹಾಗೂ ಅಲ್ಲಿ ಅಂತರ್ಜಲ ಮಟ್ಟವೂ ಉತ್ತಮವಾಗಿದೆ. ಅಲ್ಲದೆ ಶೀಘ್ರದಲ್ಲೇ ಈಶಾನ್ಯ ಮುಂಗಾರು ಆರಂಭವಾಗಲಿದ್ದು, ಜುಲೈ 29 ರಿಂದಲೇ ಸುಮಾರು 10 ಟಿಎಂಸಿ ಅಡಿ ನೀರು ತಮಿಳುನಾಡಿಗೆ ಹರಿದು ಹೋಗಿದೆ ಎಂದು ವಿವರ ನೀಡಿದರು.

    ಕುಮಾರಸ್ವಾಮಿ ಟೀಕೆಗೆ ತಿರುಗೇಟು:

    ರಾಜ್ಯ ಸರ್ಕಾರವು ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, “ಕರ್ನಾಟಕ ಸರ್ಕಾರವು ಸಂಬಂಧಿಸಿದ ಪ್ರಾಧಿಕಾರಗಳ ಮುಂದೆ ತನ್ನ ವಾದವನ್ನು ಅತ್ಯಂತ ಬಲವಾಗಿ ಮಂಡಿಸಿದೆ. ಕುಮಾರಸ್ವಾಮಿ ಅವರಿಗೆ ಈ ವಿಷಯ ಚರ್ಚಿಸಬೇಕಿದ್ದರೆ ಬರಲಿ, ನಾವು ಅವರೊಂದಿಗೆ ಚರ್ಚಿಸಲು ಸಿದ್ಧರಿದ್ದೇವೆ. ಕೇಂದ್ರ ಸಚಿವರಾಗಿರುವ ಅವರು ಕೇಂದ್ರ ಮಟ್ಟದಲ್ಲಿ ರಾಜ್ಯದ ನೀರಾವರಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಿ,” ಎಂದು ತಿರುಗೇಟು ನೀಡಿದರು.
    ಇದೀಗ ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರಿಂದ, ನ್ಯಾಯಾಲಯ ನೀಡುವ ಆದೇಶ ಹಾಗೂ ಕಾನೂನು ಸಲಹೆಗಳನ್ನು ಪರಿಶೀಲಿಸಿ ರಾಜ್ಯ ಸರ್ಕಾರವು ತನ್ನ ಮುಂದಿನ ರಾಜಕೀಯ ಮತ್ತು ಕಾನೂನಾತ್ಮಕ ತೀರ್ಮಾನಗಳನ್ನು ಕೈಗೊಳ್ಳಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಕೊರಟಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗೌತಮ ಬುದ್ಧ ಹಾಗೂ ವಿಶ್ವಗುರು ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ…

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.