ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ, ಅವರೆಲ್ಲರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಯ ತೀರ್ಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಬ್ಬಿಗೆ ಬೆಲೆ ಏರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಜೂನ್ ನಲ್ಲಿ ಜಿಲ್ಲಾಧಿಕಾರಿಗಳು ಹೇಳಿದಾಗ 3,200 ರೂ.ಗಳಿಗೆ ಅವರು ಒಪ್ಪಿರಲಿಲ್ಲ, ನಂತರದಲ್ಲಿ ಒಪ್ಪಿಕೊಂಡರು. 50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3,100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3,200 ಜೊತೆಗೆ 100 ರೂ. ಸೇರಿದಂತೆ ಒಟ್ಟು ₹3,300 ಒದಗಿಸಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಸರ್ಕಾರದ ಆದೇಶ ಸಹ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


