ಜ್ಞಾನ ಭಾರತಿ ಆವರಣದಲ್ಲಿ ನಡೆದಿದ್ದ ಅಪಘಾತದಲ್ಲಿ ಮೃತಪಟ್ಟ ಸ್ನಾತಕೋತ್ತರ ವಿದ್ಯಾರ್ಥಿನಿ ಕುಟುಂಬಕ್ಕೆ 4 ಲಕ್ಷ ಪರಿಹಾರ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
ವಿದ್ಯಾರ್ಥಿನಿ ಶಿಲ್ಪಾಶ್ರೀ (22) ಕಳೆದ ಅಕ್ಟೋಬರ್ ನಲ್ಲಿ ತರಗತಿಗೆ ಹೋಗುವಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಾಯಗೊಂಡು, ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚವನ್ನು ಭರಿಸಿದ್ದ ವಿಶ್ವವಿದ್ಯಾನಿಲಯ, ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಜೂನ್ 12ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಶಿಲ್ಪಾಶ್ರೀ ಕುಟುಂಬಕ್ಕೆ ಪರಿಹಾರ ನೀಡಲು ಒಪ್ಪಿಗೆ ಪಡೆದಿದೆ.
ಘಟನೆಯ ನಂತರ ವಿಶ್ವವಿದ್ಯಾನಿಲಯ 2023-24ರ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಅಪಘಾತ ವೆಚ್ಚಕ್ಕಾಗಿ 7 5 ಲಕ್ಷ ಮೀಸಲಿಟ್ಟಿದೆ. ಅಪಘಾತದಂತಹ ಪ್ರಕರಣಗಳು ನಡೆದರೆ ತಕ್ಷಣದ ಚಿಕಿತ್ಸೆಗೆ ಮೀಸಲಿಟ್ಟಿರುವ ಹಣ ಬಳಸಲು ಅನುಮತಿ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


