ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದಿಂದ ಗುರುವಾರ ಪ್ರತಿಭಟನೆ ನಡೆದಿದೆ. ಈ ವೇಳೆ ಸಚಿವ ಸಂತೋಷ್ ಲಾಡ್ ಮದ್ಯಪ್ರಿಯರ ಬೇಡಿಕೆಗಳನ್ನು ಆಲಿಸಿದರು. ಒಬ್ಬರಿಗೆ 1 ಕ್ವಾರ್ಟರ್ ನಿಗದಿ ಮಾಡಿ ಬಾರ್ ಗಳಲ್ಲಿ ಸ್ವಚ್ಛತೆ ಕಾಪಾಡಬೇಕು.
ಬಾರ್ ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ, ಮದ್ಯಪ್ರಿಯರ ಭವನ ಸ್ಥಾಪಿಸಬೇಕು. ಡಿಸೆಂಬರ್ 31 ಮದ್ಯಪಾನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು.
ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಮದ್ಯಪ್ರಿಯರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ. ‘ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ’ ಎಂಬ ಘೋಷಣಾ ವಾಕ್ಯದಡಿ ಸುವರ್ಣಗಾರ್ಡನ್ ಟೆಂಟ್ ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸಿದೆ. ಇನ್ನು ಸಚಿವ ಸಂತೋಷ್ ಲಾಡ್ ಮದ್ಯಪ್ರಿಯರ ಸಮಸ್ಯೆ ಆಲಿಸಿದರು.
ಲಿವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು. ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯಪ್ರಿಯರು ಎಂದು ಮಾಡಬೇಕು ಎಂದು ಸಚಿವರ ಬಳಿ ಮದ್ಯಪ್ರಿಯರು ಬೇಡಿಕೆ ಇಟ್ಟರು.
ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂ. ಪರಿಹಾರ ಘೋಷಿಸಬೇಕು ಎಂದು ಮದ್ಯಪ್ರಿಯರು ಬೇಡಿಕೆ ಇಟ್ಟರು. ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಚಿವರು ಭರವಸೆ ನೀಡಿದರು.


