ತುಮಕೂರು: ಮಹಾನಗರ ಪಾಲಿಕೆ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಜಿಲ್ಲೆಯ ಮತ್ತು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 5ರವರೆಗೆ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸಲಾಗಿದ್ದು, ಸಮೀಕ್ಷೆಯ ವರದಿಯನುಸಾರ ಜಿಲ್ಲೆಯಲ್ಲಿ ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆ ಹೊರಡಿಸಿದ್ದಾರೆ.
ತುಮಕೂರು ಜಿಲ್ಲೆಯನ್ನು ಅನೈರ್ಮಲ್ಯ ಶೌಚಾಲಯ ಮುಕ್ತ ಜಿಲ್ಲೆ ಎಂದು ಘೋಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳ ಒಳಗಾಗಿ ಲಿಖಿತವಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx