ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರ ಜನಸಂಖ್ಯೆ ಭಾರೀ ಏರಿಕೆ ಕಂಡಿದೆ. ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿ ಈ ಬಗ್ಗೆ ಮಹತ್ವದ ಅಧ್ಯಯನ ನಡೆಸಿದ್ದು, ಸ್ಫೋಟಕ ವರದಿ ಬಹಿರಂಗವಾಗಿದೆ.
ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ (EAC-PM) 1950 ಮತ್ತು 2015ರ ನಡುವೆ ಅಧ್ಯಯನ ಮಾಡಿದ್ದು, ಜನಸಂಖ್ಯೆಯಲ್ಲಿ ಭಾರೀ ಏರಿಳಿತ ಆಗಿದೆ ಎನ್ನಲಾಗಿದೆ. ಪ್ರಮುಖವಾಗಿ ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಶೇಕಡಾ 7.8ರಷ್ಟು ಇಳಿಕೆಯಾಗಿದೆ ಅನ್ನೋ ಮಾಹಿತಿ ಬಯಲಾಗಿದೆ.
1950 ಮತ್ತು 2015ರ ನಡುವೆ ಹಿಂದೂಗಳ ಜನಸಂಖ್ಯೆ 7.8% ಕುಸಿತ ಕಂಡಿದೆ. 1950 ಮತ್ತು 2015ರ ನಡುವೆ ಮುಸ್ಲಿಮರ ಸಂಖ್ಯೆ ಶೇಕಡಾ 43.15ರಷ್ಟು ಹೆಚ್ಚಳವಾಗಿದೆ. ಕ್ರಿಶ್ಚಿಯನ್ನರ ಸಂಖ್ಯೆ ಶೇಕಡಾ 5.38ರಷ್ಟು ಏರಿಕೆಯಾಗಿದೆ. ಸಿಖ್ಖರ ಜನಸಂಖ್ಯೆ ಕೂಡ ಶೇಕಡಾ 6.58 ಹೆಚ್ಚಳವಾಗಿದೆ ಎನ್ನಲಾಗಿದೆ.
1950ರಲ್ಲಿ ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಶೇಕಡಾ 84 ರಷ್ಟಿತ್ತು. ಆದ್ರೆ 2015ರಲ್ಲಿ ಹಿಂದೂಗಳ ಜನಸಂಖ್ಯೆ ಶೇಕಡಾ 78ಕ್ಕೆ ಕುಸಿತ ಕಂಡಿದೆ. 1950ರಲ್ಲಿ ಮುಸ್ಲಿಮರ ಜನಸಂಖ್ಯೆ 9.84% ಇದ್ದು 2015ರಲ್ಲಿ 14.09 ಏರಿಕೆ ಕಂಡಿದೆ. ಕೇವಲ ಭಾರತದಲ್ಲಷ್ಟೇ ಅಲ್ಲ ಪಾಕಿಸ್ತಾನ, ಬಾಂಗ್ಲಾದೇಶದಲ್ಲೂ ಮುಸ್ಲಿಂ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಅಧ್ಯಯನದಲ್ಲಿ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296