ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿದೆ, ದೀಪಾವಳಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ. ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ.
ಸಂಪುಟ ವಿಸ್ತರಣೆ ವಿಚಾರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಮತ್ತೆ ಚಿಗುರೊಡೆದಿದ್ದು, ಲಾಭಿ ಆರಂಭವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


