nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    ಜಿಲ್ಲಾ ಸುದ್ದಿ December 3, 2025

    ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ

    By adminDecember 3, 2025No Comments2 Mins Read
    dipesh deepak shenoy

    ಉಡುಪಿ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ. ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ತಮ್ಮ ಚಾತುರ್ಯ, ಸಮಯ  ಪ್ರಜ್ಞೆ ಮತ್ತು ಧೈರ್ಯಶಾಲಿ ಮಹತ್ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರದಾನ ಮಾಡಿತು.

    ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ, 2025ರ ನವೆಂಬರ್ 28ರಂದು, ಶುಕ್ರವಾರ, ಈ ಗೌರವವನ್ನು ಪ್ರದಾನ ಮಾಡಲಾಯಿತು.


    Provided by
    Provided by

    ಕರ್ನಾಟಕ ರಾಜ್ಯ ಸರ್ಕಾರವು ಮಕ್ಕಳ ಧೈರ್ಯ, ಸಮಯಪ್ರಜ್ಞೆ ಮತ್ತು ತ್ವರಿತ ನಿರ್ಧಾರಶಕ್ತಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಹೊಯ್ಸಳ ಶೌರ್ಯ ಪ್ರಶಸ್ತಿಯು ಪ್ರಮುಖವಾಗಿದೆ. ಈ ಪ್ರಶಸ್ತಿ ದೊರೆತ ದೀಪೇಶ್ ಅವರು ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಮತ್ತು ಟಿ.ಎ.ಪೈ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇತಿಹಾಸದಲ್ಲಿ ರಾಜ್ಯ ಮಟ್ಟದ ಈ ಗೌರವವನ್ನು ಸ್ವೀಕರಿಸಿದ ಮೊದಲ ವಿದ್ಯಾರ್ಥಿಯಾಗಿ ಮಹತ್ವದ ಸಾಧನೆಯನ್ನು ನಿರ್ಮಿಸಿದ್ದಾರೆ. 2025–26 ನೇ ಸಾಲಿನಲ್ಲಿ ಶಿವಮೊಗ್ಗ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ “ಏಕೈಕ ವಿಜೇತ” ಎಂಬ ವಿಶೇಷತೆಗೂ ಅವರು ಭಾಜಕರಾಗಿದ್ದಾರೆ.

    ಶಾಲೆಯ ವ್ಯವಸ್ಥಾಪಕ ಮಂಡಳಿ, ಮುಖ್ಯೋಪಾಧ್ಯಾಯಿನಿ ವಿನೋದ ಶೆಟ್ಟಿ, ಶಿಕ್ಷಕ ವೃಂದ, ಶಿಕ್ಷಕ ರಕ್ಷಕ ಸಂಘ, ಹಳೆಯ ವಿದ್ಯಾರ್ಥಿ ಸಂಘ ಮತ್ತು ಎಲ್ಲಾ ವಿದ್ಯಾರ್ಥಿಗಳು ದೀಪೇಶ್ ಅವರ ಸಾಧನೆಯ ಬಗ್ಗೆ ಗಾಢ ಹೆಮ್ಮೆ ವ್ಯಕ್ತಪಡಿಸಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಮತ್ತು ಮುಂದಿನ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

    1978ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಟಿ.ಎಂ.ಎ. ಪೈ ಅವರು ಸ್ಥಾಪಿಸಿದ ಈ ಶಾಲೆಯು ಶೀಘ್ರದಲ್ಲೇ ತನ್ನ ಸುವರ್ಣ ಮಹೋತ್ಸವ ಹಂತವನ್ನು ತಲುಪುತ್ತಿರುವುದರಿಂದ, ಪ್ರಸ್ತುತ ಹೆಮ್ಮೆಯ ವಿದ್ಯಾರ್ಥಿಯಾದ  ದೀಪೇಶ್ ದೀಪಕ್ ಶೆಣೈ ಪಡೆದ ಈ ಅತ್ಯುನ್ನತ  ಗೌರವವು  ಸಂಸ್ಥೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಗೆ ಇನ್ನಷ್ಟು ವಿಶೇಷ ನೀಡಿದೆ ಎಂದು ಶಾಲಾ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ತುಮಕೂರು: ಪಕ್ಷದ ಕಾರ್ಯಕರ್ತರು ಬಿಜೆಪಿಯ ಇತಿಹಾಸ ತಿಳಿಯಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಪಕ್ಷದ ಧೈಯೋದ್ದೇಶಗಳನ್ನು ಜನರಿಗೆ…

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.