ಬೆಂಗಳೂರು: ಡಿಸೆಂಬರ್ 14ರ ರಾತ್ರಿ ಅಲಿಪಿರಿ ಕಾಲುದಾರಿಯಲ್ಲಿ ಎರಡೂವರೆ ಗಂಟೆಗಳ ಕಾಲ ನಡೆದು ದೇವಾಲಯದ ಆವರಣವನ್ನು ತಲುಪಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಿರುಪತಿಗೆ ಆಗಮಿಸಿ ವೆಂಕಟೇಶ್ವರನ ಆಶೀರ್ವಾದ ಪಡೆದಿದ್ದಾರೆ.
ಸಹೋದರಿ ಮತ್ತು ಗಾಲ್ಫ್ ಆಟಗಾರ್ತಿ ಅನಿಶಾ ಪಡುಕೋಣೆಯೊಂದಿಗೆ ದೇವಾಲಯದ ಮೆಟ್ಟಿಲುಗಳನ್ನು ಹತ್ತುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಿರುಮಲದಲ್ಲಿರುವ ರಾಧೇಯಂ ಅತಿಥಿಗೃಹದಲ್ಲಿ ತಂಗಿದ್ದ ಅವರು ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ದೀಪಿಕಾ ಪಡುಕೋಣೆ ಗುರುವಾರ ರಾತ್ರಿ ಅಲಿಪಿರಿಯಿಂದ ಸುಮಾರು ಎರಡೂವರೆ ಗಂಟೆಗಳ ಕಾಲ ಬೆಟ್ಟ ಹತ್ತಿ ದೇವಸ್ಥಾನಕ್ಕೆ ತಲುಪಿದ್ದಾರೆ. ಅಲ್ಲಿನ ರಾಧೆ ಶ್ಯಾಮ ಗೆಸ್ಟ್ ಹೌಸ್ ನಲ್ಲಿ ತಂಗಿದ್ದು, ವಿಐಪಿ ಪಾಸ್ ಪಡೆದು, ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ದೀಪಿಕಾ ದೈವ ಭಕ್ತರು ಕೂಡ ಆಗಿರುವುದಿಂದ ಆಗಾಗ ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದಿದ್ದಾರೆ.


