ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಹೆಚ್ಚಾಗಿದೆ. ಶುಕ್ರವಾರದ ವಾಯು ಗುಣಮಟ್ಟ ಸೂಚ್ಯಂಕ 288 ಎಂದು ದಾಖಲಾಗಿದೆ. ಇದರೊಂದಿಗೆ ರಾಜಧಾನಿ ಪ್ರದೇಶದಲ್ಲಿ ಅನಾವಶ್ಯಕ ನಿರ್ಮಾಣ ಮತ್ತು ನೆಲಸಮವನ್ನು ನಿಲ್ಲಿಸುವಂತೆ ಕೇಂದ್ರ ವಾಯು ಗುಣಮಟ್ಟ ಮಂಡಳಿ ಆದೇಶಿಸಿದೆ. ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ‘ತೀವ್ರ’ ವರ್ಗಕ್ಕೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಆದೇಶದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ಆದಾಗ್ಯೂ, ಗಾಳಿಯ ಗುಣಮಟ್ಟ ಇನ್ನಷ್ಟು ಹದಗೆಟ್ಟರೆ, ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


