ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ವೃದ್ಧಾಶ್ರಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಂಭೀರವಾಗಿ ಸುಟ್ಟು ಕರಕಲಾಗಿದ್ದಾರೆ.
ಇಂದು ಮುಂಜಾನೆ 5:15ಕ್ಕೆ ಈ ಘಟನೆ ನಡೆದಿದ್ದು, ಸ್ಥಳದಿಂದ ಆರು ಮಂದಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ದಳ ಖಚಿತಪಡಿಸಿದೆ.
ಬೆಂಕಿಯ ಮಾಹಿತಿ ತಿಳಿಯುತ್ತಿದ್ದಂತೆಯೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಅಗ್ನಿಶಾಮಕ ದಳ ಘೋಷಿಸಿದ್ದು, ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy