nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    ಕೊರಟಗೆರೆ July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    By adminJuly 2, 2026No Comments2 Mins Read
    g parameshwar

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ

    ಕೊರಟಗೆರೆ: ಗಡಿಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ.  ತುಮಕೂರು-ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಬಂದಂತೆ ಕಾಣಿಸುತ್ತದೆ.

    ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನ 2012ರಲ್ಲಿ ಆರಂಭಿಸಲಾಯಿತ್ತು. ಒಟ್ಟು 206 ಕಿ.ಮೀ. ಉದ್ದದ ಲೈನ್ ಆಗಬೇಕಿದೆ. ಸುಮಾರು 1850 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಘೋಷಿಸಿದ್ದರೂ, ಆ ನಂತರ 2,500 ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ 125 ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ.

    ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ 81 ಕಿ.ಮೀ ವರೆಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಿಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನ ತೆರವು ಮಾಡಲಾಗುತ್ತಿದೆ. ಹಲವು ವರ್ಷಗಳಿಂದ ನನಗುದ್ದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭವಾಗಿರುವುದು ಈ ಭಾಗದ ಕೂಲಿ ಕಾರ್ಮಿಕರಿಗೆ, ತುಮಕೂರು ಬೆಂಗಳೂರಿಗೆ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಂತಸ ತಂದಿದೆ.

    ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಭರವಸೆ;

    ತುಮಕೂರು ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಜಯಗಳಿಸಿದ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರ ರೈಲ್ಚೆ ಸಚಿವರಾಗಿ ಸೋಮಣ್ಣ ಅವರನ್ನ ಆಯ್ಕೆ ಮಾಡಿದ್ದು ತುಮಕೂರು ಜನರಿಗೆ ಅದೃಷ್ಟ ಬಂದಂತೆ ಆಯಿತು. ತುಮಕೂರು ಜಿಲ್ಲೆಯಲ್ಲಿ ಹಲವಾರು ರೈಲ್ವೆ ಕಾಮಗಾರಿಗಳು ನೆನಗುದ್ದಿಗೆ ಬಿದ್ದಿದ್ದ, ಕಾಮಗಾರಿಗಳು ಇಂದು ಚಾಲನೆಗೊಂಡಿವೆ ಹಾಗೆ ಕಾಮಗಾರಿಗಳು ಮುಗಿದಿವೆ. ಇದರ ಜೊತೆಗೆ ಹಲವಾರು ವರ್ಷಗಳಿಂದ ಕಾಮಗಾರಿನೇ ಪ್ರಾರಂಭವಾಗದ ತುಮಕೂರು ರಾಯದುರ್ಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ಅನೇಕ ಬಾರಿ ಕೇಂದ್ರ ರೈಲ್ಚೆ ಸಚಿವ ವಿ.ಸೋಮಣ್ಣ ಅವರು 2027ರ ಒಳಗೆ ಕಾಮಗಾರಿ ಮುಗಿಯುವ ಭರವಸೆ ನೀಡಿದ್ದಾರೆ.

    ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ರೈಲ್ವೆ ಕಾಮಗಾರಿ ವೀಕ್ಷಣೆ:

    ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿ ಹಲವು ವರ್ಷಗಳಿಂದ ನೆನಗುದ್ದಿಗೆ ಬಿದ್ದಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಪಡೆಯುತ್ತಿದಂತೆ ಡಾ.ಜಿ.ಪರಮೇಶ್ವರ್ ಅವರು ಪಾವಗಡ ರೈಲು ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

    ಒಂದು ವರ್ಷದೊಳಗೆ ಪಾವಗಡದಿಂದ ತುಮಕೂರಿನವರೆಗೆ ಕಾಮಗಾರಿಯನ್ನ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಬಹು ವರ್ಷಗಳ ಕನಸಿನ ಕೂಸಾದ ತುಮಕೂರು ರಾರ್ಯದುರ್ಗ ರೈಲ್ವೆ ಕಾಮಗಾರಿ ಕನಸಾಗಿ ಉಳಿದಿತ್ತು. ನಾನು ನಮ್ಮ ಹಳ್ಳಿಯಿಂದ ತುಮಕೂರಿಗೆ ಕೆಲಸಕ್ಕೆ ಹೋಗುತ್ತಿದ್ದು, ತುಮಕೂರು ಪಾವಗಡ ರಾಜ್ಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಚಾಸ್ತಿಯಾಗಿದ್ದು, ಬೈಕ್ ಸವಾರರು ಜೀವ ಕೈಯಲ್ಲಿ ಇಟ್ಟುಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

    — ಮಹೇಶ್ ಕೂಲಿ ಕಾರ್ಮಿಕ ಮಲಪನಹಳ್ಳಿ.

    ಈ ಭಾಗದ ಸಾರ್ವಜನಿಕರ ಅನುಕೂಲಕ್ಕಾಗಿ ರೈಲು ಸಂಚಾರ ಮುಖ್ಯವಾಗಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ರೈಲ್ವೆ ಖಾತೆ ಸಚಿವರಾದ ಸೋಮಣ್ಣ ಅವರು ಈ ರೈಲ್ವೆ ಕಾಮಗಾರಿಯನ್ನ ಅದಷ್ಟು ಬೇಗ ಮುಗಿಸಿ ಈ ಭಾಗದ ಬಡವರು, ಕೂಲಿ ಕಾರ್ಮಿಕರು, ಗಾರ್ಮೇಟ್ಸ್ ಕಾರ್ಮಿಕರು, ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಡಿ.

    — ಭೀಮರಾಜು ಗ್ರಾಪಂ ಮಾಜಿ ಅಧ್ಯಕ್ಷ ಹಂಚಿಹಳ್ಳಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.