ಬೆಂಗಳೂರು: ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ರಾಜ್ಯದ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷರುಗಳ ನಿಯೋಗವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
2023–24ನೇ ಸಾಲಿನಲ್ಲಿ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿ ರೂ.5,600.00 ಕೋಟಿಗಳನ್ನು ಮಂಜೂರು ಮಾಡಿದ್ದ ನಬಾರ್ಡ್ ಸಂಸ್ಥೆಯು ಪ್ರಸಕ್ತ 2024-25 ನೇ ಸಾಲಿನಲ್ಲಿ ಕೇವಲ ರೂ. 2,340.00 ಕೋಟಿಗಳನ್ನು ಮಾತ್ರ ಮಂಜೂರು ಮಾಡಿದ್ದು. ಈ ಮೊತ್ತವು ಹಿಂದಿನ ಸಾಲಿಗೆ ಹೋಲಿಸಿದರೆ ಶೇ.58% ರಷ್ಟು ಇಳಿಕೆಯಾಗಿರುತ್ತದೆ. ಪ್ರಸಕ್ತ ನಬಾರ್ಡ್ ಸಂಸ್ಥೆಯ ರಿಯಾಯಿತಿ ಬಡ್ಡಿದರದ ಕೃಷಿ ಸಾಲದ ಮಿತಿ ಗಣನೀಯವಾಗಿ ಕಡಿಮೆಯಾಗಿರುವುದರಿಂದ ರೈತರಿಗೆ ಅವಶ್ಯಕವಾದ ಸಾಲ ಸೌಲಭ್ಯಕ್ಕೆ ಸಂಪನ್ಮೂಲದ ಕೊರತೆ ಉಂಟಾಗಿರುವ ಬಗ್ಗೆ ಚರ್ಚಿಸಲಾಯಿತು.
ರಾಜ್ಯ ಸರ್ಕಾರದಿಂದ 2002ರಲ್ಲಿ ಮುಜರಾಯಿ ನಿಧಿಗಳ ಶೇ.50% ರಷ್ಟುನ್ನು ಹಾಗೂ ಕೃಷಿ ಮಾರುಕಟ್ಟೆ ಠೇವಣಿಗಳ ಶೇ. 50% ರನ್ನು ಡಿ.ಸಿ.ಸಿ. ಬ್ಯಾಂಕುಗಳಲ್ಲಿ ಠೇವಣಿ ಇಡಿಸಲು ಆದೇಶವಾಗಿದ್ದು ಇದು ಪಾಲನೆಯಾಗಿರುವುದಿಲ್ಲ. ಆದ್ದರಿಂದ ಅಪೇಕ್ಸ್ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕುಗಳಲ್ಲಿ ಸರ್ಕಾರದ ಸ್ವಾಯತ್ತ ಸಂಸ್ಥೆಗಳು ಇಲಾಖೆಗಳು ಹಾಗೂ ಸ್ಥಳೀಯ ಸಂಸ್ಥೆಗಳು ಠೇವಣಿ ಮಾಡಿ ವ್ಯವಹರಿಸಲು ಕೇರಳ ರಾಜ್ಯದ ಮಾದರಿಯಂತೆ ಸೂಕ್ತ ಸೂಚನೆ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಇದೇ ಸಮಯದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅಪೇಕ್ಷೆ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಸಹಕಾರ ಬ್ಯಾಂಕ್ ನಿಂದ ಸುಮಾರು 8 ಕೋಟಿಯಷ್ಟು ಹಣವನ್ನು ಚೆಕ್ ಮುಖಾಂತರ ನೀಡಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


