ದೆಹಲಿ: ದೇಶದ ಅತಿದೊಡ್ಡ ವಿಮಾನ ನಿಲ್ದಾಣವಾದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿಯ ಒಂದು ಭಾಗ ಕುಸಿದಿದ್ದು, ಪರಿಣಾಮವಾಗಿ 6 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಿಂದಾಗಿ ಅನೇಕ ಕಾರುಗಳು ಮತ್ತು ಟ್ಯಾಕ್ಸಿಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇಲ್ಛಾವಣಿಯ ಶೀಟ್ ನ ಹೊರತಾಗಿ ಸಪೋರ್ಟ್ ಬೀಮ್ ಕೂಡ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಬ್ಬಿಣ ಸರಳುಗಳು ಬಿದ್ದ ಕಾರಿನಿಂದ ಆರು ಮಂದಿಯಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅಪಘಾತದ ನಂತರ, ಟರ್ಮಿನಲ್ 1 ರಿಂದ ಹೊರಡುವ ಮತ್ತು ಟರ್ಮಿನಲ್ 1 ಗೆ ಆಗಮಿಸುವ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆಯೇ ಮೇಲ್ಛಾವಣಿ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ದೆಹಲಿಯಲ್ಲಿ ಭಾರೀ ಪ್ರವಾಹ ಮತ್ತು ರಸ್ತೆಗಳು ಮತ್ತು ಇತರ ಪ್ರದೇಶಗಳಲ್ಲಿ ನೀರು ನಿಂತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA