ತುಮಕೂರು: ನವದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ.
ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪಿ.ಎಚ್.ಕಾಲೋನಿ ನಿವಾಸಿ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದರು. ದೆಹಲಿ ಬಾಂಬ್ ಸ್ಫೋಟಕ್ಕೂ, ಈತನಿಗೂ ಯಾವುದೇ ಸಂಬಂಧ ಇಲ್ಲದ ಕಾರಣಕ್ಕೆ ವಿಚಾರಣೆ ನಂತರ ಬಿಟ್ಟು ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.
ಕಲಿಫತ್ ಉಗ್ರ ಸಂಘಟನೆಯೊಂದಿಗೆ ಮುಜಾಯುದ್ದೀನ್ ಗುರುತಿಸಿಕೊಂಡಿದ್ದ. ನಗರದಲ್ಲಿ ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಎನ್ ಐಎ ತಂಡ ಆತನನ್ನು ಬಂಧಿಸಿ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ತಿಂಗಳು ಶಿಕ್ಷೆ ಅನುಭವಿಸಿ ಹೊರ ಬಂದಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


