ನವದೆಹಲಿ: ಪ್ರಧಾನಿ ಮೋದಿ ಹಾಗೂ ಅವರ ಸಚಿವರು ವಿಮಾನಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾದರೆ, ದೇಶಾದ್ಯಂತ ಮಹಿಳೆಯರು ಯಾಕೆ ಉಚಿತ ಬಸ್ ಪ್ರಯಾಣ ಮಾಡಬಾರದು ಎಂದು ನವದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಹೊರಗಿದ್ದಾರೆ. ಉಚಿತ ಬಸ್ ಪ್ರಯಾಣ ಕುರಿತ ಮೋದಿ ಹೇಳಿಕೆಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಿಎಂ ಕೇಜ್ರಿವಾಲ್ ಟಾಂಗ್ ಕೊಟ್ಟಿದ್ದಾರೆ.
ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದನ್ನು ಪ್ರಧಾನಿ ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ದೇಶಾದ್ಯಂತ ಉಚಿತ ಬಸ್ ಪ್ರಯಾಣವನ್ನು ಪರಿಚಯಿಸಬೇಕೆಂದು ಮಹಿಳೆಯರು ಬಯಸುತ್ತಾರೆ. ಆದರೆ ಪ್ರಧಾನಿ ಮತ್ತು ಅವರ ಮಂತ್ರಿಗಳು ಉಚಿತ ವಿಮಾನ ಪ್ರಯಾಣವನ್ನು ಪಡೆಯಬಹುದಾದರೆ, ದೇಶಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಏಕೆ ಪಡೆಯಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿಯವರ ಸಂದರ್ಶನದ ವೀಡಿಯೋ ಕ್ಲಿಪ್ ಅನ್ನು ನವದೆಹಲಿ ಸಿಎಂ ಹಂಚಿಕೊಂಡಿದ್ದಾರೆ. ಉಚಿತ ಬಸ್ ಪ್ರಯಾಣ ಕಲ್ಪಿಸುವುದು ಆರ್ಥಿಕವಾಗಿ ಲಾಭದಾಯಕವಲ್ಲ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296