ನವದೆಹಲಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ. ವಿಪಕ್ಷ ಸ್ಥಾನವನ್ನು ಗಳಿಸಲ್ಲ ಎಂದು ಪ್ರಧಾನಿ ಮೋದಿ ಭವಿಷ್ಯ ನುಡಿದಿದ್ದಾರೆ.
ಇದಕ್ಕೆ ಕಾಂಗ್ರೆಸ್ ಕೂಡ ಕೌಂಟರ್ ನೀಡಿದೆ. ಬಿಜೆಪಿ 180 ಸ್ಥಾನ ಕೂಡ ಗಳಿಸಲ್ಲ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲ್ಲ ಎಂದು ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಪ್ರಧಾನಿಯಲ್ಲ. ರಾಜನಂತೆ ವರ್ತಿಸ್ತಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇಬೇಕು. ಯಾರು ಯಾರನ್ನು ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವ್ರಂತೂ, ಬಿಜೆಪಿಯ ಅಲಿಖಿತ ನಿಯಮದ ಪ್ರಕಾರ 75 ವರ್ಷ ಆದವರು ನಿವೃತ್ತಿ ಪಡೀಬೇಕು. ಅದರಂತೆ ಮೋದಿ 75 ವರ್ಷ ಆದ್ಮೇಲೆ ರಾಜಕೀಯ ನಿವೃತ್ತಿ ಪಡೀತಾರಾ ಎಂದು ಸವಾಲು ಹಾಕಿದ್ದಾರೆ.
ಮೋದಿ ಮತ್ತೊಮ್ಮೆ ಗೆದ್ರೆ ಯುಪಿ ಸಿಎಂ ಯೋಗಿಯನ್ನು ಸೈಡ್‍ಲೈನ್ ಮಾಡ್ತಾರೆ. ಅಮಿತ್ ಶಾಗಾಗಿಯೇ ಮೋದಿ ವೋಟ್ ಕೇಳ್ತಿದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ. ಈ ಬೆನ್ನಲ್ಲೇ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ. 75 ವರ್ಷಕ್ಕೆ ಮೋದಿ ನಿವೃತ್ತಿಯಾಗಲ್ಲ. ಈ ವಿಚಾರವನ್ನು ಮೊದಲೇ ತಿಳಿಸಿದ್ದೇವೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296