ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗೆ ಶೀಘ್ರದಲ್ಲಿಯೇ ಮುಹೂರ್ತ ನಿಗದಿಯಾಗಲಿದೆ. ಹೀಗಾಗಿ ಇಂದು ಅಥವಾ ನಾಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಅಥವಾ ನಾಳೆ ಸಂಜೆ ಮುಖ್ಯಮಂತ್ರಿ ದೆಹಲಿಗೆ ತೆರಳಲಿದ್ದು, ಭಾನುವಾರ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ.
ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣಕ್ಕೆ ಸಜ್ಜಾಗಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಭಿ ಆರಂಭಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಯಾವೆಲ್ಲ ನಾಯಕರಿಗೆ ಮಣೆಹಾಕಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


