ದೆಹಲಿ: ಆಮ್ ಆದ್ಮಿ ಪಕ್ಷದ ವರಿಷ್ಠ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲಾಗಿದ್ದು, ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಎಎಪಿಗೆ ಭಾರೀ ಮುಖಭಂಗವಾಗಿದೆ.
ಸತತ ಎರಡು ಬಾರಿ ದೆಹಲಿಯಲ್ಲಿ ಗೆಲುವು ದಾಖಲಿಸಿದ್ದ ಆಮ್ ಆದ್ಮಿ ಪಾರ್ಟಿಗೆ ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ಗೆಲುವಿನ ನಗೆಬೀರಿದೆ.
ಸೋಲಿನ ಬೆನ್ನಲ್ಲೇ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ, ಜನರ ಸೇವೆಯಲ್ಲಿ ನಮ್ಮ ಪಕ್ಷ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4