ನವದೆಹಲಿ: ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಪಿಂಕ್ ಲೈನ್ ನಲ್ಲಿರುವ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆಯ ಒಂದು ಭಾಗ ಕುಸಿದಿದ್ದು, ಕಾರವಾಲ್ ನಗರದ 53 ವರ್ಷದ ವಿನೋದ್ ಕುಮಾರ್ ಮೃತಪಟ್ಟಿದ್ದಾರೆ.
ಗಾಯಾಳುಗಳು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


