ಮೈಸೂರು: ದೆಹಲಿ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ ಎಂದಿದ್ದಾರೆ.
ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದರು.
ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4