ಬೆಂಗಳೂರು: ದೆಹಲಿಯ ಗೆಲುವು ನಮಗೆ ಮಾದರಿಯಾಗಬೇಕು, ಕರ್ನಾಟಕ ಬಿಜೆಪಿಯ ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಮಾಧ್ಯಮ ಹೇಳಿಕೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಪರಿಶ್ರಮದಿಂದ ಎಂದ ಅವರು,, ಸಂಘಟನೆ ಮತ್ತು ಜನಪರ ರಾಜಕೀಯದ ಫಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯ ಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು ಎಂದರು.
ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ತಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಒದಗಿಸುತ್ತಿದೆ ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ ಮತ್ತು ಸಂಘಟನಾ ದೌರ್ಬಲ್ಯದಿಂದ ಬಳಲುತ್ತಿದೆ. ಪಕ್ಷದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯಗಳು ಮತ್ತು ಗುಂಪು ರಾಜಕಾರಣದಿಂದ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4