ಬೀದರ್: ಔರಾದ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ನಿಜವಾದ ಫಲಾನುಭವಿಗಳಿಗೆ ಸಾಲ ದೊರಕಿಸಿ ಕೊಡುವಂತೆ ಇಂಡಿಯನ್ ಯೂಥ್ ಕಾಂಗ್ರೆಸ್ ಆಗ್ರಹಿಸಿದೆ.
ಮುಖಂಡ ಅನೀಲ್ ಹೇಡೆ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿ. ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬರುವ ಸಾಲದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಲ ನೀಡಲು ಸ್ಥಳೀಯ ಬ್ಯಾಂಕ್ ಗಳ ಸಿಬ್ಬಂದಿಯವರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಸರಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರೆಯಬೇಕು, ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಅನಿಲ್ ನಿರ್ಮಳೆ, ದತ್ತಾತ್ರಿ ಬಾಪುರೆ, ಚಂದು ಡಿಕೆ.ರಾಜಕುಮಾರ ಮುಧಾಳೆ, ಹರಿದೇವ ಸಂಗನಾಳ, ಸಂದೀಪ್ ಮಾನೆ, ಸಚೀನ್ ಮೇತ್ರೆ, ಅಹಿಂದ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ಪೂಲಾರಿ, ವಿನೇಕ್ ನಿರ್ಮಳೆ, ರಜನಿಕಾಂತ ದಾಮಾ, ವಿಶಾಲ್ ಹಾಜರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4