ಕರ್ನಾಟಕ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಕಡೆಯ ಸಚಿವರು ರಾಜ್ಯ ಸರ್ಕಾರದಲ್ಲಿ ಹೆಚ್ಚಿನ ಉಪಮುಖ್ಯಮಂತ್ರಿಗಳ ಬೇಡಿಕೆ ಇಟ್ಟಿದ್ದಾರೆ.
ಅಲ್ಪಸಂಖ್ಯಾತ ಮತ್ತು ದಲಿತ ಸಮುದಾಯದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ. ಸಚಿವರ ಬೇಡಿಕೆಗಳಿಗೆ ಡಿ.ಕೆ. ಶಿವಕುಮಾರ್ ತೃಪ್ತಿ ಇಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ.
ಇನ್ನೂ ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂಬ ನಿಲುವಿನಲ್ಲಿ ಸಿದ್ದರಾಮಯ್ಯ ಇದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ನಿರೀಕ್ಷಿತ ಗೆಲುವು ಸಾಧಿಸದಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರೇ ಸಂಪೂರ್ಣ ಹೊಣೆ ಎಂದು ಸಿದ್ದರಾಮಯ್ಯ ಅವರ ಕಡೆಯ ಕೆಲ ಸಚಿವರು ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಷ್ಟು ಉಪಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


