ಸರಗೂರು: ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ಅವರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಚಿವ ಸ್ಥಾನ ನೀಡಬೇಕೆಂದು ಯೂತ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಮಸಹಳ್ಳಿ ನವೀನ್ ಒತ್ತಾಯಿಸಿದ್ದಾರೆ.
ಕ್ಷೇತ್ರದಲ್ಲಿ ಎರಡು ಬಾರಿ ಸತತವಾಗಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂಥವರಿಗೆ ಸಚಿವ ಸ್ಥಾನ ನೀಡಿದರೆ, ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಹಾಯಕವಾಗಬಹುದು. ಸಂಪುಟ ಸಭೆಯಲ್ಲಿ ರಾಜಣ್ಣ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅನಿಲ್ ಚಿಕ್ಕಮಾಧು ಅವರಿಗೆ ನೀಡಲು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಮೈಸೂರು ಮತ್ತು ಚಾಮರಾಜನಗರ ವ್ಯಾಪ್ತಿಯ ನಾಯಕ ಸಮುದಾಯದ ಪ್ರಭಾವಿ ಮುಖಂಡರು ಹಾಗೂ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ
ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ವರಿಷ್ಠರು ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡುತ್ತಿರುವುದನ್ನು ಮನಗಂಡು ಸಚಿವ ಸ್ಥಾನ ನೀಡಬೇಕು. ಅನಿಲ್ ಚಿಕ್ಕಮಾದು ಸರ್ಕಾರದಿಂದ ಅನುದಾನ ತಂದು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತಿದ್ದಾರೆ. ನಾಯಕ ಸಮುದಾಯದ ಇಬ್ಬರೂ ಸಚಿವರು ರಾಜೀನಾಮೆ ನೀಡಿದ್ದು, ಅವರ ಸ್ಥಾನಕ್ಕೆ ಅನಿಲ್ ಚಿಕ್ಕಮಾದು ಅವರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC