ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾವೇರಿ ಪಾಲಿಗೆ ಕಾಂಗ್ರೆಸ್ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ ಎಂದರು. ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್. ಡಿ.ಕೆ ಎಂದಿದ್ದಾರೆ.
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟ ಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಹಾಗೂ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಬಗ್ಗೆ ಅವರು ಮಾತನಾಡಿದರು.
ತಮಿಳುನಾಡಿಗೆ ನೀರು ಬಿಡುವ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಕಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I. N. D. I. A. ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಹೆಚ್. ಡಿ. ಕೆ ಕಿಡಿಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


