nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ
    ಜಿಲ್ಲಾ ಸುದ್ದಿ January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    By adminJanuary 12, 2026No Comments2 Mins Read
    sargur

    ಸರಗೂರು:  ಶಿಥಿಲಗೊಂಡಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಶೀಘ್ರ‍್ರದಲ್ಲೇ ಕೆಡವಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು.

    ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನೂತನ ಅಧ್ಯಕ್ಷೆ ಚೈತ್ರಾಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಹೃದಯ ಭಾಗದಲ್ಲಿರುವ ಪಟ್ಟಣ ಪಂಚಾಯಿತಿ ಹಳೆಯ ಕಟ್ಟಡವನ್ನು ಕೆಡವಿ ನೂತನ ಕಟ್ಟಡವನ್ನು ನಿರ್ಮಿಸಬೇಕು. ಇದಕ್ಕಾಗಿ ೫೦ ಲಕ್ಷ ರೂ. ಅನುದಾನ ಇದ್ದು, ಹೆಚ್ಚುವರಿ ಅನುದಾನಕ್ಕಾಗಿ ಸರಕಾರದೊಂದಿಗೆ ಚರ್ಚಿಸಿ ಬಿಡುಗಡೆ ಮಾಡಿಸಿಕೊಡಲಾಗುವುದು ಎಂದು ಹೇಳಿದರು.

    ಇದಕ್ಕೆ ಪ್ರತಿಕ್ರಿಯಸಿದ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್‌ಕುಮಾರ್, ಪಟ್ಟಣ ಪಂಚಾಯಿತಿ ಕಚೇರಿ ಸ್ಥಳಾಂತರಕ್ಕೆ ಕಟ್ಟಡ ಸಮಸ್ಯೆಯಿದ್ದು, ಕಟ್ಟಡ ಗುರುತಿಸಿದ ಕೂಡಲೇ ಸ್ಥಳಾಂತರಗೊಂಡು ಪಂಚಾಯಿತಿ ಕಚೇರಿ ಕೆಡವಿ ನೂತನ ಕಟ್ಟಡ ನಿರ್ಮಾಣ ಮುಂದಾಗಲಾಗುವುದು. ಹೆಚ್ಚುವರಿಯಾಗಿ ಸರಕಾರಕ್ಕೆ ೫ ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಜಂಗಲ್ ತೆರವು ೭ ದಿನ ಗಡುವು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಜೋರಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅಡೆಗಡೆಯಾಗಿದೆ. ಖಾಲಿ ನಿವೇಶನಗಳಲ್ಲಿ ಆಳೆತ್ತರ ಗಿಡ–ಗಂಟಿಗಳು ಬೆಳೆದು ಪ್ರಾಣಿಗಳ ಆವಾಸ ಸ್ಥಾನವಾಗಿದೆ. ಇದಲ್ಲದೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ಜಮೀನುಗಳಲ್ಲಿಯೂ ಮರಗಿಡಗಳ ಹೇರಳವಾಗಿ ಬೆಳೆದು ನಿಂತಿವೆ ಎಂದು ಸದಸ್ಯ ಚಲುವಕೃಷ್ಣ ಸಭೆಯ ಗಮನ ಸೆಳೆದರು.

    ಶಾಸಕ ಅನಿಲ್ ಚಿಕ್ಕಮಾದು ಪ್ರತಿಕ್ರಿಯಿಸಿ, ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡಬೇಕು. ಗಿಡ–ಗಂಟಿಗಳನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ಕಂದಾಯ ಭೂಮಿಗಳಲ್ಲಿಯೂ ಬೆಳೆದಿರುವ ಜಂಗಲ್ ತೆರವಿಗೆ ತಹಶೀಲ್ದಾರ್ ಅವರು ಸೂಚನೆ ನೀಡಬೇಕು. ವಾರದೊಳಗೆ ಜಂಗಲ್ ತೆರವುಗೊಳಿಸಬೇಕು ಎಂದು ಗಡುವು ನೀಡಿದರು.

    ಟ್ರಾಫಿಕ್ ಸರಿಪಡಿಸಿ: ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಇದ್ದು, ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕು. ಅಲ್ಲಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂಬ ನಾಮಫಲಕ ಅಳವಡಿಸಲು ಕ್ರಮವಹಿಸಬೇಕು. ವಾಹನಗಳು ಸೂಕ್ತ ಸ್ಥಳ ನಿಲ್ಲಿಸುವಂತೆ ಪೊಲೀಸರು ಸೂಚನೆ ನಿಡಬೇಕು ಎಂದು ತಾಕೀತು ನೀಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್‌ ಐ ಆರ್.ಕಿರಣ್, ಆಟೋ ಚಾಲಕರು ಶಿಸ್ತಿನಿಂದ ಟ್ರಾಫಿಕ್ ನಿಯಮ ಪಾಲಿಸುತ್ತಿದ್ದಾರೆ. ನಾಲ್ಕು ಚಕ್ರದ ಗೂಡ್ಸ್ ವಾಹನಗಳು, ಕಾರು, ಜೀಪ್‌ ಗಳಿಗೆ ವಾಹನ ನಿಲುಗಡೆಗೆ ಪ್ರತ್ಯೇಕವಾದ ಜಾಗಬೇಕು ಎಂದು ಸಲಹೆ ನೀಡಿದರು. ಆಗ ಮುಖ್ಯಾಧಿಕಾರಿ ಸಂತೋಷ್‌ ಕುಮಾರ್, ಸದಸ್ಯರಾದ ಶ್ರೀನಿವಾಸ್ ಮಾತನಾಡಿ, ಬಸ್ ನಿಲ್ದಾಣದ ಹಿಂಭಾಗದಲ್ಲಿ ಬಾಬು ಜಗಜೀವನ್‌ ರಾಮ್ ಸಮುದಾಯ ಭವನದ ಪಕ್ಕದಲ್ಲಿ ಸಾರ್ವಜನಿಕ ಜಾಗವಿದ್ದು, ಅಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಟ್ಟರೆ ಅನುಕೂಲವಾಗಲಿದೆ ಎಂದರು. ಇದಕ್ಕೆ ಶಾಸಕರು ಶೀಘ್ರದಲ್ಲೆ ವಾಹನಗಳ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಯಾರಿಗೂ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

    ಯುಜಿಡಿ ಸಮಸ್ಯೆ: ಬಸ್ ನಿಲ್ದಾಣದಲ್ಲಿ ಶೌಚಕ್ಕೆ ತುಂಬಾ ಸಮಸ್ಯೆಯಾಗಿದ್ದು, ಯುಜಿಡಿ ನೀರು ಹೊರ ಬಂದು ಕೆಟ್ಟ ವಾಸನೆ ಬರುತ್ತಿದ್ದು, ಶೀಘ್ರದಲ್ಲೇ ಬಗೆಹರಿಸಬೇಕು ಎಂದ ಶಾಸಕರು ಸಾರಿಗೆ ಇಲಾಖೆಯ ಡಿಸಿ ಅವರಿಗೆ ಕರೆ ಮಾಡಿ, ಹಿಂಗು ಗುಂಡಿ ತೆಗೆಯಿಸಿ, ಸ್ವಚ್ಛತೆಗೆ ಆದ್ಯತೆ ನೀಡಬೇಕು. ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಸಮಸ್ಯೆ ಉಲ್ಬಣಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

    ಆಶ್ರಯ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಬೇಕು. ಮನೆಗಳನ್ನು ಮಂಜೂರು ಮಾಡಿಸಿಕೊಡಬೇಕು. ಕುಡಿಯುವ ನೀರಿಗೆ ಅವಶ್ಯಕತೆ ಇರುವೆಡೆ ಬೋರ್‌ವೆಲ್‌ನ ಕೊಳವೆ ಬಾವಿ ಕೊರೆಯಿಸಿ. ೧೧ನೇ ವಾರ್ಡ್ ನಲ್ಲಿರುವ ಗ್ರಾಮ ಠಾಣಾ ಜಾಗದಲ್ಲಿ ೨ ಎಕರೆ ಆಶ್ರಯ ಬಡಾವಣೆ, ಇನ್ನುಳಿದ ಜಾಗವನ್ನು ವಿವಿಧ ಸಮಾಜದವರ ಸಮುದಾಯ ಭವನ ನಿರ್ಮಾಣಕ್ಕೆ ಮೀಸಲಿಡಿ ಎಂದು ಹೇಳಿದರು.

    ಮುಖ್ಯಾಧಿಕಾರಿ ಎಸ್.ಕೆ.ಸಂತೋಷ್‌ ಕುಮಾರ್ ಸಭಾ ವರದಿ ಓದಿದರು. ತಹಶೀಲ್ದಾರ್ ಮೋಹನಕುಮಾರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚೈತ್ರಾಸ್ವಾಮಿ, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ಹೇಮಾವತಿ ರಮೇಶ್, ಸಣ್ಣತಾಯಮ್ಮ, ಚಂದ್ರಕಲಾರಾಜಣ್ಣ, ಪಿಎಸ್‌ ಐ ಆರ್.ಕಿರಣ್, ಸಾರಿಗೆ ಇಲಾಖೆಯ ಮಹದೇವಣ್ಣ, ಅರಣ್ಯ ಇಲಾಖೆ ಡಿಆರ್‌ ಎಫ್‌ ಓ ಪ್ರದೀಪ್, ಸಿಬ್ಬಂದಿಗಳಾದ ರಾಮು, ಪಳನಿ, ಶಿವಪ್ರಸಾದ್, ಅನಿತಾಕುಮಾರಿ, ಅರ್ಜುನ, ಸ್ವಾಮಿ, ನಾಗೇಶ್, ಗಿರೀಶ್, ಶಾಸಕರ ಆಪ್ತ ಸಹಾಯಕ ಸುದರ್ಶನ್, ಸಿದ್ದರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.