ಡೆಂಗಿ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದು, ಕಳೆದ 20 ದಿನಗಳಲ್ಲಿ 1, 330 ಮಂದಿಗೆ ಡೆಂಗಿ ದೃಢಪಟ್ಟಿದೆ. ಬಿಸಿಲು ಮಳೆಯಿಂದಾಗಿ ಈ ಜ್ವರಕ್ಕೆ ಅಧಿಕ ಮಂದಿ ಒಳಪಡುತ್ತಿದ್ದಾರೆ.
ರಾಜ್ಯದಲ್ಲಿ ಈ ವರ್ಷ 4,053 ಡೆಂಗಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಅರ್ಧಕ್ಕೂ ಅಧಿಕ ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ. ನಗರದಲ್ಲಿ ಈವರೆಗೆ 2,078 ಡೆಂಗಿ ಪ್ರಕರಣಗಳು ವರದಿಯಾಗಿವೆ.
ಇವುಗಳಲ್ಲಿ 1, 047 ಪ್ರಕರಣಗಳನ್ನು ಬಿಬಿಎಂಪಿ ತಡವಾಗಿ ವರದಿ ಮಾಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 4, 742 ಮಂದಿ ಡೆಂಗಿ ಶಂಕಿತರನ್ನು ಗುರುತಿಸಿ, ಅವರಲ್ಲಿ 3, 457 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.
ಈವರೆಗೆ ಒಟ್ಟು 2, 062 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 64 ಮಂದಿ ಶಂಕಿತರನ್ನು ಗುರುತಿಸಿ, 32 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ. ಅವರಲ್ಲಿ 16 ಮಂದಿಯಲ್ಲಿ ಈವರೆಗೆ ಜ್ವರ ದೃಢಪಟ್ಟಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
ಕಳೆದ ವರ್ಷ ಈ ವೇಳೆ ಬಿಬಿಎಂಪಿ ವ್ಯಾಪ್ತಿಯಲ್ಲಿ 723 ಹಾಗೂ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 33 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದವು. ಚಿಕೂನ್‌ಗುನ್ಯಾ ಜ್ವರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ 415 ಮಂದಿ ರೋಗ ಶಂಕಿತರನ್ನು ಗುರುತಿಸಿ, 75 ಮಂದಿಗೆ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ.
ಈವರೆಗೆ 34 ಚಿಕೂನ್ ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 162 ಮಂದಿ ರೋಗ ಶಂಕಿತರನ್ನು ಗುರುತಿಸಿ, 58 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿದೆ. 29 ಪ್ರಕರಣಗಳು ದೃಢಪಟ್ಟಿವೆ. ಕಳೆದ ವರ್ಷ ಈ ವೇಳೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 25 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 8 ಪ್ರಕರಣಗಳು ದೃಢಪಟ್ಟಿದ್ದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


