ಬೆಂಗಳೂರು: ಎಸ್ ಡಿ ಎಂ ಸಿಗೆ ಶಾಲೆಗಳ ಅಭಿವೃದ್ಧಿಗಾಗಿ 100 ರೂ. ದೇಣಿಗೆ ಸಂಗ್ರಹಕ್ಕೆ ಅನುಮತಿ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರುಸುತ್ತೋಲೆ ಹೊರಡಿಸಿದ್ದರು. ಈ ಆದೇಶ ಭಾರಿ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು.
ಅಲ್ಲದೇ ರಾಜ್ಯ ಸರ್ಕಾರದ ದಿವಾಳಿ ತನವನ್ನು ಎತ್ತಿ ತೋರಿಸುತ್ತಿದೆ ಎಂಬುದಾಗಿ ವಿಪಕ್ಷಗಳ ನಾಯಕರು, ಸಾರ್ವಜನಿಕರು ಗುಡುಗಿದ್ದರು. ಈ ಬೆನ್ನಲ್ಲೇ ಶಿಕ್ಷಣ ಇಲಾಖೆಯಿಂದ 100 ರೂ. ದೇಣಿಗೆ ಸಂಗ್ರಹದ ಆದೇಶವನ್ನು ಹಿಂಪಡೆಯಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ಶಿಕ್ಷಣ ಸಚಿವರ ಸೂಚನೆಯ ಮೇರೆಗೆ, 100 ರೂ. ದೇಣಿಗೆ ಸಂಗ್ರಹದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಆದೇಶ ಹೊರಡಿಸುವ ಮುನ್ನ ಪ್ರತಿಕ್ರಿಯಿಸಿದ ಸಚಿವ ಬಿ.ಸಿ.ನಾಗೇಶ್ ಕೆಲವೊಂದು ಸುತ್ತೋಲೆಗಳು ಸರ್ಕಾರದ ಗಮನಕ್ಕೆ ಬರುವುದಿಲ್ಲ. 100 ರೂ ಸಂಗ್ರಹ ಸಂಬಂಧ ಹೊರಡಿಸಿರುವಂತ ಸುತ್ತೋಲೆ ಶಿಕ್ಷಣ ಇಲಾಖೆಯಿಂದ ಹೊರಡಿಸಿರೋದಾಗಿದೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz