ನವದೆಹಲಿ: ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ.ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಲಂಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
2006-2007 ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿಂದೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


