ನವದೆಹಲಿ : ದೇಶದ ಜನರಿಗೆ 2022 ರ ದೀಪಾವಳಿಯಲ್ಲಿ, ಜಿಯೋ 5 ಜಿ ಅನ್ನು ಭಾರತದ ಮೆಟ್ರೋ ನಗರಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಆರ್ಐಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಹೇಳಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ 45 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, 5ಜಿಯನ್ನು ಬಳಸಿಕೊಂಡು, ನಾವು ಉನ್ನತ ಗುಣಮಟ್ಟದ, ಹೆಚ್ಚು ಕೈಗೆಟುಕುವ ಸ್ಥಿರ ಬ್ರಾಡ್ಬ್ಯಾಂಡ್ ಸೇವೆಗಳ ರೋಲ್-ಔಟ್ ಅನ್ನು ತ್ವರಿತಗೊಳಿಸಬಹುದು ಎಂದು ಮುಕೇಶ್ ಅಂಬಾನಿ ಹೇಳಿದರು, ಜಿಯೋ 5 ಜಿ ವಿಶ್ವದ ಅತ್ಯಂತ ಸುಧಾರಿತ 5 ಜಿ ಆಗಿದೆ ಎಂದು ಅವರು ಹೇಳಿದರು.
ನಮ್ಮ ಕಂಪನಿಯು ವಾರ್ಷಿಕ ಆದಾಯದಲ್ಲಿ 100 ಬಿಲಿಯನ್ ಡಾಲರ್ ದಾಟಿದ ಭಾರತದ ಮೊದಲ ಕಾರ್ಪೊರೇಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy